ಯುದ್ಧ ನಿಲ್ಲಿಸಲು ಒಂದೇ ಉಪಾಯ ?

ಗುರುವಾರ, 7 ಏಪ್ರಿಲ್ 2022 (11:25 IST)
ಕೀವ್ : ಉಕ್ರೇನ್ನ ಬುಚಾ ನಗರದಲ್ಲಿ ನಡೆಯುತ್ತಿರುವ ಘಟನೆಗಳು ಕ್ಷಮಿಸಲಾಗದವು.

ಆದರೂ ಉಕ್ರೇನ್ ಮತ್ತು ರಷ್ಯಾ ಮಾತುಕತೆ ಮುಂದುವರಿಸುವಂತಹ ಕಠಿಣ ಆಯ್ಕೆಯನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದರು.

ಉಕ್ರೇನ್ ಅಧ್ಯಕ್ಷ ಮಂಗಳವಾರ ಯುದ್ಧವನ್ನು ಕೊನೆಗೊಳಿಸಲು ರಷ್ಯಾದೊಂದಿಗೆ ಮಾತುಕತೆ ನಡೆಸುವುದನ್ನು ಬಿಟ್ಟು ಉಕ್ರೇನ್ಗೆ ಬೇರೆ ಯಾವುದೇ ದಾರಿಯಿಲ್ಲ. ಆದರೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವೈಯಕ್ತಿಕವಾಗಿ ಮಾತುಕತೆ ನಡೆಸಲು ಒಪ್ಪುವ ಸಾಧ್ಯತೆ ಕಡಿಮೆ ಇದೆ ಎಂದು ತಿಳಿಸಿದರು. 

 
ಉಕ್ರೇನ್ ರಾಜಧಾನಿ ಕೀವ್ ಸುತ್ತಲಿನ ನಗರಗಳಲ್ಲಿ ಇತ್ತೀಚೆಗೆ ನೂರಾರು ಶವಗಳು ಬೀದಿ ಬೀದಿಗಳಲ್ಲಿ ಕಂಡುಬಂದಿದ್ದು ಈ ಮೂಲಕ ರಷ್ಯಾ ಸೈನಿಕರ ಕ್ರೂರತೆ ಬಯಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ