ಕೇರಳದಿಂದ ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಮಂಗಳವಾರ, 31 ಆಗಸ್ಟ್ 2021 (14:50 IST)
ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರೂ 1 ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ಗೆ ಒಳಗಾಗಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

 ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕೇರಳದಲ್ಲಿ ಸೋಂಕು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬರ್ತಿರೋ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅಂತಂದ್ರು.
ಸಾಂಸ್ಥಿಕ ಕ್ವಾರಂಟೈನ್ಗೆಂದೇ ಬೆಂಗಳೂರಿನ ಹಲವೆಡೆ ಸೆಂಟರ್ಗಳನ್ನು ತೆರೆಯಲಾಗಿದೆ. ಆದರೆ ಕ್ವಾರಂಟೈನ್ ವೆಚ್ಚವನ್ನು ಸಂಬಂಧಪಟ್ಟ ವ್ಯಕ್ತಿಗಳೇ ಭರಿಸಬೇಕು ಎಂತಲೂ ಇದೇ ವೇಳೆ ಮಾಹಿತಿ ನೀಡಿದ್ರು.
ಇನ್ನು ಲಸಿಕಾ ಅಭಿಯಾನದ ಕುರಿತು ಮಾತನಾಡಿದ ಅವರು ಬೆಂಗಳೂರು ಜಿಲ್ಲೆಯಲ್ಲಿ 100 ಪ್ರತಿಶತ ಸಿಂಗಲ್ ಡೋಸ್ ಲಸಿಕೆ ಹಂಚಿಕೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ರು. ಅಲ್ಲದೇ ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವ ಇಲ್ಲ ಎಂತಲೂ ಇದೇ ವೇಳೆ ಸ್ಪಷ್ಟನೆ ನೀಡಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ