ವರ್ಷ ಪೂರೈಸಿದ ಲಸಿಕಾ ಅಭಿಯಾನ

ಭಾನುವಾರ, 16 ಜನವರಿ 2022 (13:17 IST)
ನವದೆಹಲಿ : ಲಸಿಕಾ ಅಭಿಯಾನ ಒಂದು ವರ್ಷ ಪೂರೈಸಿರುವ ಕುರಿತು ಟ್ವೀಟ್ ಮಾಡಿರುವ ಅವರು, ಲಸಿಕೆ ಪಡೆದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ.

ಲಸಿಕಾ ಅಭಿಯಾನವು ಕೊರೊನಾ ವಿರುದ್ಧ ಹೋರಾಡಲು ಹೆಚ್ಚಿನ ಶಕ್ತಿಯನ್ನು ನೀಡಿದೆ. ಕೊರೊನಾ ಸಾಂಕ್ರಾಮಿಕ ಮೊದಲ ಬಾರಿಗೆ ಅಪ್ಪಳಿಸಿದಾಗ ಈ ಬಗ್ಗೆ ನಮಗೂ ಹೆಚ್ಚೆನೂ ಮಾಹಿತಿ ಇರಲಿಲ್ಲ. ಆದರೂ ವಿಜ್ಞಾನಿಗಳು ಲಸಿಕೆಯನ್ನು ಅಭಿವೃದ್ಧಿ ಪಡಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಲಸಿಕೆ ಮೂಲಕ ಕೊರೊನಾ ವಿರುದ್ಧ ಹೋರಾಡಲು ನಮಗೆ ಸಹಾಯವಾಗಿದೆ ಎಂದು ತಿಳಿಸಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಲಸಿಕೆ, 156.76 ಡೋಸ್ ವಿತರಣೆಯಾಗಿದೆ. ಕಳೆದ 24 ಗಂಟೆಗಳಲ್ಲಿ 66 ಲಕ್ಷಕ್ಕೂ ಹೆಚ್ಚು ಡೋಸ್ಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಮತ್ತು ಸ್ಫೂರ್ತಿದಾಯಕ ನಾಯಕತ್ವದಿಂದಾಗಿ ಕೊರೊನಾ ವಿರುದ್ಧ ಸಾಮೂಹಿಕವಾಗಿ ಹೋರಾಡಲು ಸಹಾಯಕವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಭಾರತದಲ್ಲಿ ಲಸಿಕಾ ಅಭಿಯಾನ ಹೇಗೆ ಪ್ರಾರಂಭವಾಯಿತು ಮತ್ತು ಒಂದು ವರ್ಷದ ಅವಧಿಯಲ್ಲಿ 150 ಕೋಟಿಗೂ ಹೆಚ್ಚು ಡೋಸ್ಗಳನ್ನು ನೀಡುವಲ್ಲಿ ಹೇಗೆ ಯಶಸ್ವಿಯಾದೆವು ಎನ್ನುವುದರ ಬಗ್ಗೆ ಚಾರ್ಟ್ನ್ನು ಅವರು ಹಂಚಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ