ಸಾಲುಮರದ ತಿಮ್ಮಕ್ಕ ಈಗ ಪರಿಸರ ರಾಯಭಾರಿ

ಶುಕ್ರವಾರ, 8 ಜುಲೈ 2022 (13:46 IST)
ಬೆಂಗಳೂರು : ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವುದರ ಜೊತೆಗೆ ಅವರಿಗೆ ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ಕೂಡ ಸರ್ಕಾರ ನೀಡಿದೆ.

ರಾಜ್ಯದ ಉದ್ದಗಲಕ್ಕೂ ಪರಿಸರ ರಕ್ಷಣೆಯ ಕುರಿತು ಪ್ರಚಾರ ಮಾಡಲು ತಿಮ್ಮಕ್ಕ ಅವರಿಗೆ ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರವೇ ಖರ್ಚು ಭರಿಸಲಿದೆ. 

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಕೆಲದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದರು.

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸೂರು ಗ್ರಾಮದವರು. ಅವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭಿಸಲಿಲ್ಲ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ