ನವದೆಹಲಿ : ಭಾರತದಲ್ಲಿ ಕೊರೊನಾ ಮೂರನೇ ಅಲೆ ಬಂದಿರುವುದನ್ನು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತಗೊಳಿಸಿದೆ.
ಇಂದು 491 ಮಂದಿ ಮರಣಹೊಂದಿದ್ದಾರೆ. ಈ ಮೂಲಕ ಒಟ್ಟು ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,87,693ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ 19,24,051 ಸಕ್ರಿಯ ಪ್ರಕರಣಗಳಿವೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಹಲವು ಮಾಹಿತಿಗಳನ್ನು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.
ಈ ಪೈಕಿ ದೇಶದಲ್ಲಿ 515 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ 5%ಗಿಂತ ಹೆಚ್ಚಾಗಿದೆ. 11 ರಾಜ್ಯಗಳಲ್ಲಿ 50 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗಿದೆ ಎಂದು ಮಾಹಿತಿ ನೀಡಿದೆ.
ಭಾರತದಲ್ಲಿ ಮೂರನೇ ಅಲೆ ದೃಢ ಪಟ್ಟಿದ್ದು, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಡೆಲ್ಲಿ ಮತ್ತು ಉತ್ತರ ಪ್ರದೇಶಕ್ಕೆ ಹೈಅಲರ್ಟ್ ಘೋಷಣೆ ಮಾಡಿದೆ. ಕೇಂದ್ರ ತಂಡ ಈ ರಾಜ್ಯಗಳಿಗೆ ಭೇಟಿ ಕೊಡಲಿದೆ ಎಂದು ಆರೋಗ್ಯ ಇಲಾಖೆ ಘೋಷಿಸಿದೆ.