ಈ ಬಾರಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುತ್ತೇವೆ : ಸಿದ್ದರಾಮಯ್ಯ

ಶನಿವಾರ, 13 ಮೇ 2023 (11:42 IST)
ಮೈಸೂರು : ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡಿದೆ.
 
ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಾವು 120 ಕ್ಕಿಂತ ಹೆಚ್ಚು ಸ್ಥಾನ ಗೆದ್ದುಕೊಂಡು ಬರುತ್ತೇವೆ ಎಂದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಲೆಕ್ಕಾಚಾರದಂತೆ ನಾವು ಮುನ್ನಡೆ ಸಾಧಿಸಿದ್ದೇವೆ. 120ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ