ನಂದಿಗಿರಿಧಾಮಕ್ಕೆ ಲಗ್ಗೆ ಇಟ್ಟ ಸಾವಿರಾರು ಪ್ರವಾಸಿಗರು

ಭಾನುವಾರ, 1 ಜನವರಿ 2023 (07:47 IST)
ಚಿಕ್ಕಬಳ್ಳಾಪುರ : ಹೊಸ ವರ್ಷದ ಸಂಭ್ರಮಾಚರಣೆಗೆ  ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಆಗಮಿಸಿದೆ.
 
ಬೆಳ್ಳಂಬೆಳಗ್ಗೆ ಕಾರು ಹಾಗೂ ಬೈಕ್ ಗಳಲ್ಲಿ ನಾ ಮುಂದು ತಾ ಮುಂದು ಅಂತ ಪ್ರವಾಸಿಗರು ನಂದಿಬೆಟ್ಟದತ್ತ ಲಗ್ಗೆಯಿಟ್ಟಿದ್ದಾರೆ. ಹೊಸ ವರ್ಷದ ಮೊದಲ ದಿನ ನಂದಿಬೆಟ್ಟದಿಂದಲೇ ಸೂರ್ಯೋದಯದ ಸವಿಯನ್ನು ಸವಿಯಲು ಸಾವಿರಾರು ಮಂದಿ ನಂದಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.

ಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಮಧ್ಯರಾತ್ರಿಯೇ ನಂದಿಬೆಟ್ಟದ ಚೆಕ್ ಪೋಸ್ಟ್ ಬಳಿ ಸಾವಿರಾರು ಮಂದಿ ಜಮಾಯಿಸಿದ್ದರು.

ವೆಬ್ದುನಿಯಾವನ್ನು ಓದಿ