ಇಂದಿನಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ!

ಗುರುವಾರ, 11 ನವೆಂಬರ್ 2021 (12:02 IST)
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ನವೆಂಬರ್ 13 ರವೆರೆಗೆ, 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
ಇಂದಿನಿಂದ ರಿಂದ ಮೂರು ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನವೆಂಬರ್ 10 ರಿಂದ ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದ್ದು, ನವೆಂಬರ್ 12 ಮತ್ತು 13 ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಇವತ್ತು ಬೆಂಗಳೂರಿನಲ್ಲಿ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಗರಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಚಿಕ್ಕಬಳ್ಳಾಪುರ 23-16, ಮೈಸೂರು 24-19, ಹಾಸನ 23-17, ಮಂಗಳೂರು 30-24, ಉಡುಪಿ 31-24, ಉತ್ತರ ಕನ್ನಡ 30-19, ಶಿವಮೊಗ್ಗ 28-19, ದಾವಣಗೆರೆ 29-19, ತುಮಕೂರು 24-18 ತಾಪಮಾನ ದಾಖಲಾಗಲಿದೆ. ಇನ್ನುಳಿದಂತೆ ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದ್ದು, ಬೆಳಗಿನ ಜಾವ ಶೀತಗಾಳಿ ಸುಳಿಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ