ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಗುರುವಾರ ರಜೆ

ಗುರುವಾರ, 6 ಜುಲೈ 2023 (10:49 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
 
ಮಳೆ ಕಾರಣಕ್ಕೆ ಸತತ ಮೂರು ದಿನಗಳಿಂದ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆ ಮಳೆ ಮುಂದುವರಿಯುವ ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. 

ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.6 ರಂದು ರಜೆ ಘೋಷಿಸಲಾಗಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ