ಇಂದು ಪ್ರಧಾನಿ ಮಹತ್ವ ʻಕೋವಿಡ್ʼ ಸಭೆ

ಬುಧವಾರ, 27 ಏಪ್ರಿಲ್ 2022 (07:35 IST)
ನವದೆಹಲಿ : ಕಳೆದ ಎರಡು ವಾರಗಳಿಂದ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.

ಪರಿಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಪ್ರಧಾನ ಮಂತ್ರಿ ಕಚೇರಿ ಪ್ರಕಾರ, ವರ್ಚುವಲ್ ಸಭೆಯು ಬುಧವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.  ಪ್ರಧಾನ ಮಂತ್ರಿ ಮತ್ತು ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆಯಾ ಸಚಿವಾಲಯಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಈ ಹಿಂದೆಯೂ ಸಹ ಪ್ರಧಾನಿ ಮೋದಿ ಅವರು ಕೋವಿಡ್ ವಿಷಯವಾಗಿ ಮುಖ್ಯಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ. 

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,483 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಬುಲೆಟಿನ್ ಪ್ರಕಾರ, ಸಕ್ರಿಯ ಪ್ರಕರಣ 15,636 ಇದ್ದರೆ, ಪಾಸಿಟಿವಿಟಿ ದರ ಶೇ.0.55 ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ