ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ

ಭಾನುವಾರ, 17 ಜೂನ್ 2018 (08:54 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ನಾಲ್ಕನೇ ಸಭೆ ಭಾನುವಾರ (ಇಂದು) ದೆಹಲಿಯಲ್ಲಿ ನಡೆಯಲಿದೆ.


ಈ ಸಭೆ ಶನಿವಾರ ನಿಗದಿಯಾಗಿದ್ದು, ಆದರೆ ಈದ್‌ನಲ್ಲಿ ಪಾಲ್ಗೊಳ್ಳಬೇಕಾದ್ದರಿಂದ ಸಭೆಯಲ್ಲಿ ಭಾಗವಹಿಸಲು ಕೆಲವು ಮುಖ್ಯಮಂತ್ರಿಗಳು ಅಸಮ್ಮತಿ ವ್ಯಕ್ತಪಡಿಸಿದ ಕಾರಣ ಇಂದು ನಡೆಯಲಿದೆ. ಇಂದು ದಿನವಿಡಿ ನಡೆಯಲಿರುವ ಸಭೆಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌, ಕೇಂದ್ರ ಸಚಿವರು ಮತ್ತು ತಜ್ಞರು ಭಾಗವಹಿಸಲಿದ್ದಾರೆ.


ಈ ಸಭೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು. ಹಾಗೇ ಆಯುಷ್ಮಾನ್‌ ಭಾರತ, ರಾಷ್ಟ್ರೀಯ ಪೋಷಕಾಂಶ ಅಭಿಯಾನ, ಇಂದ್ರಧನುಷ್‌ ನಂತಹ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಅನುಷ್ಠಾನ ಕೂಡ ಚರ್ಚೆಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ