ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ ವೈಪರಿತ್ಯ ಹಿನ್ನೆಲೆ ಬೆಂಗಳೂರು ಸೇರಿದಂತೆ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ.
ಬೆಂಗಳೂರಿಗೆ ಜಿಟಿ ಜಿಟಿ ಮಳೆ ತಪ್ಪಿದಲ್ಲ. ಇನ್ನುಳಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ. ಇತ್ತ ರಾಜ್ಯದ ಬಹುತೇಕ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ. ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ 13 ಜಿಲ್ಲೆಗಳಿಗೆ ಅಲರ್ಟ್ ಸಂದೇಶ ರವಾನಿಸಲಾಗಿದ್ದು, ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಅಬ್ಬರ ಮುಂದುವರಿಯಲಿದೆ. ಶನಿವಾರದವರೆಗು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.