ಪೊಲೀಸ್ ಇಲಾಖೆಯಿಂದ ಗಣೇಶೋತ್ಸವಕ್ಕೆ ಟಫ್ ರೂಲ್ಸ್ !

ಭಾನುವಾರ, 17 ಸೆಪ್ಟಂಬರ್ 2023 (13:23 IST)
ಬೆಂಗಳೂರು : ಗಣೇಶೋತ್ಸವ ಸಂಭ್ರಮಕ್ಕೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಿಸುವವರಿಗೆ ನಗರ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಹಲವು ಮಾರ್ಗಸೂಚಿಗಳನ್ನ ಜಾರಿಗೊಳಿಸಿದೆ.

ವಿಷಯಗಳನ್ನ ಉಲ್ಲೇಖಿಸಲಾಗಿದೆ. ನಿಯಮಗಳನ್ನ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿಯೂ ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ. 

ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ ಗೈಡ್‌ಲೈನ್ಸ್
*             ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ.
* ಚೌತಿ ಕಾರ್ಯಕ್ರಮಕ್ಕೆ ಕಾನೂನು ಬಾಹಿರವಾಗಿ ವಂತಿಕೆ ಸಂಗ್ರಹ ಮಾಡುವಂತಿಲ್ಲ
*             ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್ಗೆ ವಿಶೇಷ ಅನುಮತಿ ಪಡೆಯಬೇಕು.
*             ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ.
*             ಮೆರವಣಿಗೆ ವೇಳೆ ಏನೇ ಅಹಿತಕರ ಘಟನೆ ನಡೆದರೆ ಸಂಘಟಕರೇ ನೇರ ಹೊಣೆ
*             ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಗ್ರಿಗಳು ಹಾಗೂ ಅಡುಗೆ ಮಾಡುವಂತಿಲ್ಲ.
*             ಗಣೇಶೋತ್ಸವದ ವೇದಿಕೆ ಸುತ್ತಮುತ್ತ ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಿಸಬೇಕು.
*             ಮೂರ್ತಿ ಸ್ಥಾಪನೆ ಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಗ್ರಿಗಳನ್ನು ಇಡಬಾರದು.
*             ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ ಅನುಮತಿ ಕಡ್ಡಾಯ.
*             ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್.
*             ಯಾವುದೇ ಕಾರಣಕ್ಕೂ ಡಿಜೆ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ.
*             ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ.
*             ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮಕ್ಕೆ ರಾತ್ರಿ 10 ವರೆಗೆ ಮಾತ್ರ ಅವಕಾಶ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ