ರೈಲು ದುರಂತ : 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ!

ಬುಧವಾರ, 7 ಜೂನ್ 2023 (11:12 IST)
ಭುವನೇಶ್ವರ : ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 275 ಮೃತರ ಪೈಕಿ, 101 ಮೃತದೇಹಗಳ ಗುರುತು ಇನ್ನೂ ಪತ್ತೆಯೇ ಆಗಿಲ್ಲ. ಕೇವಲ 55 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
 

ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಅವರು ಈ ಸಂಬಂಧ ಮಾಹಿತಿ ನೀಡಿದ್ದಾರೆ. ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿಸಿದ್ದಾರೆ. 


ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ. ಅವರ ಪೈಕಿ ಸುಮಾರು 900 ಜನರನ್ನು ಚಿಕಿತ್ಸೆ ನಂತರ ಡಿಸ್ಚಾರ್ಜ್ ಮಾಡಲಾಗಿದೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 278 ಮಂದಿ ಪೈಕಿ, 101 ಮೃತದೇಹಗಳು ಇನ್ನೂ ಉಳಿದಿವೆ. ಅವರು ಯಾರೆಂಬ ಗುರುತು ಪತ್ತೆಯಾಗಬೇಕಿದೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ