ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ

ಮಂಗಳವಾರ, 21 ಫೆಬ್ರವರಿ 2023 (14:34 IST)
ಬೆಂಗಳೂರು : ಐಪಿಎಸ್ ವರ್ಸಸ್ ಐಎಎಸ್ ಜಟಾಪಟಿ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಿದ್ದು, ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಲು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಂಬಂಧಿಸಿ ಸ್ಥಳ ನಿಯುಕ್ತಿಗೊಳಿಸದೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಡಿ. ರೂಪಾ ಕರಕುಶಲ ಅಭಿವೃದ್ಧಿ ನಿಗಮ ಎಂಡಿಯಾಗಿದ್ದರು ಹಾಗೂ ರೋಹಿಣಿ ಸಿಂಧೂರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತೆಯಾಗಿದ್ದರು. ಇವರ ಜೊತೆಗೆ ರೂಪಾ ಅವರ ಪತಿ ಐಎಎಸ್ ಅಧಿಕಾರಿ ಮನೀಷ್ ಮೌದ್ಗಿಲ್ರನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ