ಭಾರತದ ಶಿಕ್ಷಣ ನೀತಿಯಲ್ಲಿ ಅಭೂತಪೂರ್ವ ಹೆಜ್ಜೆ : ಮೋದಿ

ಸೋಮವಾರ, 21 ಫೆಬ್ರವರಿ 2022 (14:00 IST)
ನವದೆಹಲಿ : ಡಿಜಿಟಲ್ ವಿಶ್ವವಿದ್ಯಾನಿಲಯವು ಭಾರತದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಭೂತಪೂರ್ವ ಹೆಜ್ಜೆಯಾಗಿದ್ದು, ದೇಶದಲ್ಲಿ ಸೀಟುಗಳ ಕೊರತೆಯ ಸಮಸ್ಯೆಯನ್ನು ಕೊನೆಗೊಳಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.

2022ರ ಕೇಂದ್ರ ಬಜೆಟ್ನಲ್ಲಿ ಮಾಡಲಾದ ಘೋಷಣೆಗಳ ಅನುಷ್ಠಾನದ ಕುರಿತು ಶಿಕ್ಷಣ ಸಚಿವಾಲಯದ ವೆಬಿನಾರ್ನ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, 2022-23ರ ಕೇಂದ್ರ ಬಜೆಟ್ ಹೊಸದನ್ನು ಜಾರಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದೋಂದು ಆಳವಾದ ಶಿಕ್ಷಣ ನೀತಿಯಾಗಿದೆ ಎಂದರು.

ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಡಿಜಿಟಲ್ ಸಂಪರ್ಕವು ಭಾರತದ ಶಿಕ್ಷಣ ವ್ಯವಸ್ಥೆಯನ್ನು ಹೇಗೆ ಚಾಲನೆಯಲ್ಲಿಟ್ಟಿತು ಎಂಬುದನ್ನು ಸಹ ಪ್ರಧಾನಿಯವರು ವೆಬಿನಾರ್ನಲ್ಲಿ ಭಾಗವಹಿಸಿದ ಸಭಿಕರಿಗೆ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ