ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾಗಶಃ ಒಣ ಹವೆ ಇರಲಿದೆ. ಬೆಂಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಸಣ್ಣ ಪ್ರಮಾಣದ ಮಳೆಯಾಗಿತ್ತು. ಕೊಡಗು, ಶಿವಮೊಗ್ಗ,. ಹಾಸನ, ಚಿಕ್ಕಮಗಳೂರಿನಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಭಾರೀ ಮಳೆಯ ನಿರೀಕ್ಷೆಯಲ್ಲಿ ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಏಳು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಇಂದು ತಿರುನಲ್ವೇಲಿ ಮತ್ತು ಕನ್ಯಾಕುಮಾರಿ, ರಾಮನಾಥಪುರಂ ಮತ್ತು ತೂತುಕುಡಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.