ಬೆಂಗಳೂರು : 15 ರಿಂದ 18 ವರ್ಷದ ಮಕ್ಕಳಿಗೆ ನಾಳೆಯಿಂದ (ಜನವರಿ 03) ಕೊರೊನಾ ಲಸಿಕೆ ನೀಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಲಸಿಕೆ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ವಿದ್ಯಾರ್ಥಿಗಳು ಲಸಿಕೆ ಪಡೆದ ಮರು ದಿನ ರಜೆ ನೀಡುವುದಕ್ಕೆ ತೀರ್ಮಾನ ಮಾಡಲಾಗಿದೆ.
ಮೊದಲ ದಿನ 50 ವಿದ್ಯಾರ್ಥಿಗಳಿಗೆ ಮಾತ್ರ ಕೊವಿಡ್ ಲಸಿಕೆ ನೀಡಲಾಗುತ್ತಿದೆ. ಅಂದರೆ ಒಂದು ಶಾಲೆಯಲ್ಲಿ 50 ವಿದ್ಯಾರ್ಥಿಗಳಿಗೆ ಮಾತ್ರ ಕೊವಿಡ್ ಲಸಿಕೆ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ನೀಡಲಾಗುತ್ತದೆ.
ಮೊದಲ ಬಾರಿ ಮಕ್ಕಳಿಗೆ ವ್ಯಾಕ್ಸಿನ್ ಹಾಕುವ ಹಿನ್ನೆಲೆ, 30 ನಿಮಿಷ ಕಾಯುವ ಕೋಣೆಗೆ ಆದ್ಯತೆ ನೀಡಲಾಗಿದೆ. ವ್ಯಾಕ್ಸಿನ್ ಪಡೆದ ವಿದ್ಯಾರ್ಥಿಗೆ ಕೈನೋವು, ಸುಸ್ತು, ಜ್ವರ ಕಾಣಿಸಿಕೊಂಡರೆ ರಜೆ ಪಡೆಯಬಹುದು