ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಶುಕ್ರವಾರ, 25 ಆಗಸ್ಟ್ 2023 (07:02 IST)
ಬೆಂಗಳೂರು : ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಶುಭ ಶುಕ್ರವಾರದ ದಿನ ಇಂದು ವರಮಹಾಲಕ್ಷ್ಮಿ ಹಬ್ಬಕ್ಕೆ ಬರುವ ಮಹಿಳಾ ಭಕ್ತರಿಗೆ ವಿಶೇಷ ಹಬ್ಬದ ಉಡುಗೊರೆಯೊಂದು ಕಾದಿದೆ.

ಈಗಾಗಲೇ ಬೆಂಗಳೂರಿನ ಬನಶಂಕರಿ ದೇಗುಲ ಸೇರಿದಂತೆ ಮುಜರಾಯಿ ದೇಗುಲದಲ್ಲಿ ಇಂದು ಪೂಜೆಗೆ ಎಲ್ಲಾ ಸಿದ್ಧತೆ ಮಾಡಲಾಗಿದ್ದು, ಮಹಿಳಾ ಭಕ್ತರಿಗೆ ಕೊಡುವ ಎಲ್ಲಾ ಅರಿಶಿನ, ಕುಂಕುಮ, ಬಳೆಗಳ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಬರುವಂತಹ ಭಕ್ತರಿಗೆ ಇದನ್ನು ವಿತರಣೆ ಮಾಡಲಾಗುತ್ತದೆ. ಬೆಳಗ್ಗೆಯಿಂದ ಸಂಜೆಯವರೆಗೆ ದೇಗುಲಕ್ಕೆ ಬರುವ ಮಹಿಳಾ ಭಕ್ತರಿಗೆ ಉಡುಗೊರೆ ಕೊಡಲಾಗುತ್ತದೆ.

ಮಾರುಕಟ್ಟೆಯಲ್ಲಿ ಖರೀದಿ ಜೋರು
ಸಾಮಾನ್ಯವಾಗಿ ಹಬ್ಬದ ದಿನಗಳಂದು ಖರೀದಿ ಭರಾಟೆ ಜೋರಾಗಿರುತ್ತದೆ. ಅಲ್ಲದೇ ಹೂ, ಹಣ್ಣು ಅಗತ್ಯ ವಸ್ತುಗಳ ಬೆಲೆಯಲ್ಲಿ ದುಪ್ಪಟ್ಟಾಗಿರುತ್ತದೆ. ಅಂತೆಯೇ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರಾಗಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಬೆಳ್ಳಂಬೆಳಗ್ಗೆ ಹೂ, ಹಣ್ಣು ಕೊಳ್ಳಲು ಜನ ಮುಗಿಬಿದ್ದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ