ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿತದ ಎಫೆಕ್ಟ್!
ಕೇಂದ್ರ ಸರ್ಕಾರ ತೈಲ ಬೆಲೆ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ದರವನ್ನು ಪ್ರತಿ ಲೀಟರ್ಗೆ ₹3 ಕ್ಕಿಂತ ಹೆಚ್ಚಿನ ದರವನ್ನು ಕಡಿಮೆ ಮಾಡಿದೆ.
ಈ ಕುರಿತು ಟ್ವೀಟ್ ಮೂಲಕ ಘೋಷಿಸಿರುವ ಸಿಎಂ ನಿತೀಶ್ ಕುಮಾರ್, ಕೇಂದ್ರ ಸರ್ಕಾರ ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿರುವ ಹಿನ್ನೆಲೆ ನಮ್ಮ ರಾಜ್ಯ ಸರ್ಕಾರ ತೈಲ ಬೆಲೆ ಮೇಲಿನ ವ್ಯಾಟ್ ದರಗಳನ್ನು ಇಳಿಸುವ ಮೂಲಕ ಜನರ ಮೇಲಿನ ಹೊರೆ ಕಡಿಮೆ ಮಾಡುತ್ತಿದ್ದೇವೆ ಅಂತ ಹೇಳಿದ್ದಾರೆ. ಪ್ರತಿ ಲೀಟರ್ ಪೆಟ್ರೊಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ ₹ 3.20 ಮತ್ತು ₹3.90ರಷ್ಟು ಕಡಿಮೆ ಮಾಡಿರುವುದಾಗಿ ನಿತೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.