ವಿಧಾನಪರಿಷತ್ ಸಭಾಪತಿ ವಿವಾದ: ಇಂದು ರಾಜ್ಯಪಾಲರ ಭೇಟಿ ಮಾಡಲಿರುವ ಬಿಜೆಪಿ ನಿಯೋಗ
ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ವಿಧಾನಪರಿಷತ್ ಸ್ಥಾನಕ್ಕೆ ಪೈಪೋಟಿಯಿದೆ. ಇದರಿಂದಾಗಿ ಇನ್ನೂ ಪರಿಷತ್ ಸಭಾಪತಿ ಸ್ಥಾನಕ್ಕೆ ಖಾಯಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿಲ್ಲ. ಸದ್ಯಕ್ಕೆ ಜೆಡಿಎಸ್ ಶಾಸಕ ಬಸವರಾಜ ಹೊರಟ್ಟಿ ಹಂಗಾಮಿ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಆದರೆ ಹಂಗಾಮಿ ಸ್ಪೀಕರ್ ಕಾರ್ಯ ವ್ಯಾಪ್ತಿ ಸೀಮಿತವಾಗಿದೆ. ಆದರೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಇನ್ನೂ ಸ್ಪೀಕರ್ ನೇಮಕ ಮಾಡದೇ ಸದನ ನಡೆಸುತ್ತಿರುವುದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ರಾಜ್ಯಪಾಲ ವಜುಬಾಯಿ ವಾಲಾಗೆ ಇಂದು ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಒತ್ತಾಯ ಮಾಡಲಿದೆ.