ನಿಯಮ ಉಲ್ಲಂಘನೆ : ದಂಡ ಪಾವತಿಗೆ 50% ಡಿಸ್ಕೌಂಟ್

ಶನಿವಾರ, 4 ಫೆಬ್ರವರಿ 2023 (07:30 IST)
ಬೆಂಗಳೂರು : ಸಂಚಾರಿ ನಿಯಮಗಳನ್ನು ಪಾಲಿಸದೇ ಉಲ್ಲಂಘನೆ ಮಾಡಿ ದಂಡವನ್ನು ಬಾಕಿ ಉಳಿಸಿಕೊಂಡಿರುವ ಸವಾರರಿಗೆ ಸಿಹಿ ಸುದ್ದಿ.

ಬಾಕಿ ಉಳಿಸಿಕೊಂಡ ದಂಡದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಪ್ರಕಿಟಿದೆ. ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ಸರ್ಕಾರಕ್ಕೆ ದಂಡ ಕಡಿತಗೊಳಿಸುವ ಕುರಿತು ಮನವಿ ಮಾಡಿದ್ದರು.

ಈ ಸಂಬಂಧ ಹೈಕೋರ್ಟ್ (ನ್ಯಾಯಮೂರ್ತಿ, ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ನ್ಯಾ ಬಿ.ವೀರಪ್ಪರವರ ನೇತೃತ್ವದಲ್ಲಿ ಜ.27 ರಂದು ಸಭೆ ನಡೆದು ನಿರ್ಣಯ ಕೈಗೊಳ್ಳಲಾಗಿತ್ತು.

ಈಗ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಇ ಚಲನ್ ಗಳ ಮೂಲಕ ಹಾಕಿರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಿ ಸರ್ಕಾರದ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸಾರಿಗೆ ಇಲಾಖೆಯ ಫೆ.11ರ ಒಳಗೆ ಇತ್ಯರ್ಥವಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ.50ರಷ್ಟು ವಿನಾಯಿತಿ ನೀಡಿ ಆದೇಶ ಪ್ರಕಟಿಸಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ