ಬಂದ್ ವೇಳೆ ಕಾನೂನು ಉಲ್ಲಂಘನೆ : 13 ಕೇಸ್, 12 ಮಂದಿ ಅರೆಸ್ಟ್

ಮಂಗಳವಾರ, 12 ಸೆಪ್ಟಂಬರ್ 2023 (08:10 IST)
ಬೆಂಗಳೂರು : ಖಾಸಗಿ ಬಸ್ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು, 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ರೂ. ನೀಡಬೇಕು, ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನ ಆಗ್ರಹಿಸಿ ಬೆಂಗಳೂರು ಬಂದ್ಗೆ ಕರೆ ನೀಡಿದ್ದ ಖಾಸಗಿ ಸಾರಿಗೆ ಒಕ್ಕೂಟ ಮಧ್ಯಾಹ್ನದ ವೇಳೆಗೆಲ್ಲಾ ಬಂದ್ ವಾಪಸ್ ಪಡೆದಿದೆ.

ಇಂದಿನ ಪ್ರತಿಭಟನೆಯಲ್ಲಿ ಪೊಲೀಸರು ಒಟ್ಟು 13 ಪ್ರಕರಣಗಳನ್ನ ದಾಖಲಿಸಿದ್ದಾರೆ. 13 ಕೇಸ್ ದಾಖಲಿಸಿ ಕಾನೂನು ಉಲ್ಲಂಘನೆ ಮಾಡಿದ 12 ಮಂದಿಯನ್ನ ಬಂಧಿಸಿದ್ದಾರೆ.

ಕೇಂದ್ರ ವಿಭಾಗದಲ್ಲಿ 1 ಕೇಸ್, ಆಗ್ನೇಯ ವಿಭಾಗದಲ್ಲಿ 1 ಕೇಸ್, ಉತ್ತರ ವಿಭಾಗದಲ್ಲಿ 2 ಕೇಸ್, ಈಶಾನ್ಯ ವಿಭಾಗದಲ್ಲಿ 2 ಕೇಸ್, ಹಾಗೂ ಪಶ್ಚಿಮ ವಿಭಾಗದಲ್ಲಿ 7 ಪ್ರಕರಣಗಳು ದಾಖಲಾಗಿವೆ. ಒಟ್ಟು 13 ಕೇಸ್ನಲ್ಲಿ 12 ಜನರನ್ನ ಅರೆಸ್ಟ್ ಮಾಡಿರುವ ನಗರ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಇದನ್ನ ಹೊರತುಪಡಿಸಿದ್ರೆ ಬಹುತೇಕ ಬಂದ್ ಶಾಂತಿಯುತವಾಗಿ ನಡೆದಿದ್ದು, ಖಾಸಗಿ ಸಾರಿಗೆಗಳು ತಮ್ಮ ಬೇಡಿಕೆಯನ್ನ ಸರ್ಕಾರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಿದ್ದಾರೆ.

ಸೋಮವಾರ ಮಧ್ಯಾಹ್ನ ಸಚಿವ ರಾಮಲಿಂಗಾರೆಡ್ಡಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ