ಬೆಂಗಳೂರಿಗರೇ ಎಚ್ಚರ !?

ಸೋಮವಾರ, 27 ಡಿಸೆಂಬರ್ 2021 (13:01 IST)
ಬೆಂಗಳೂರು : ನೈಟ್ ಕರ್ಫ್ಯೂ ವೇಳೆ ಸರ್ಕಾರದ ಗೈಡ್ಲೈನ್ಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಬೇಕು.

ಇಲ್ಲವಾದರೆ ಅವರ ಮೇಲೆ ದೂರು ದಾಖಲಿಸಲಾಗುವುದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ತಡೆಗಟ್ಟುವ ಹಿನ್ನೆಲೆಯಲ್ಲಿ ಹತ್ತು ಗಂಟೆಯಿಂದ ಐದು ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಆ ಸಮಯದಲ್ಲಿ ಅನಾವಶ್ಯಕವಾಗಿ ಯಾರು ಹೊರಗಡೆ ಬರುವಂತಿಲ್ಲ.

ಜೊತೆಗೆ ಯಾರಿಗೂ ಯಾವುದೇ ಪಾಸ್ ನೀಡಲಾಗುವುದಿಲ್ಲ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ. ಈಗಿರುವ ನಿಯಮಗಳಲ್ಲಿ ಯಾವುದೇ ರೀತಿಯ ಬದಲಾವಣೆಗಳಿಲ್ಲ. ಈಗಾಗಲೇ ಸಂಬಂಧಪಟ್ಟ ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಮಾಹಿತಿ ನೀಡಿದ್ದೇವೆ.

ಇವತ್ತು ಮತ್ತೊಮ್ಮೆ ಸಭೆ ಸೇರಿ ಪರಿಣಾಮಕಾರಿಯಾಗಿ ಜಾರಿ ಮಾಡಲು ತಿರ್ಮಾನ ಮಾಡುತ್ತೇವೆ. ಸರ್ಕಾರದ ಆದೇಶವನ್ನು ಅನುಸರಿಸುವುದು ನಮ್ಮ ಕರ್ತವ್ಯವಾಗಿದೆ ಎಂದ ಅವರು ಜನರು ಗುಂಪು ಸೇರದೆ, ಮಾರ್ಗಸೂಚಿಯನ್ನು ಅನುಸರಿಸಿ ಎಂದು ಮನವಿ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ