ನಡೆದಾಡೋ ದೇವರ ಜನ್ಮ ದಿನಾಚರಣೆ ಪೂರ್ತಿ ಅಪ್ಡೇಟ್

ಗುರುವಾರ, 31 ಮಾರ್ಚ್ 2022 (07:58 IST)
ತುಮಕೂರು : ಕಾಯಕಯೋಗಿ, ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ.

ಶ್ರೀಗಳ 115ನೇ ಜನ್ಮ ದಿನೋತ್ಸವಕ್ಕೆ ಸಿದ್ದಗಂಗಾ ಮಠದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ.

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯರಾದಾಗ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಯಾವೊಬ್ಬ ರಾಷ್ಟ್ರೀಯ ನಾಯಕರೂ ಶ್ರೀಗಳ ಅಂತಿಮ ದರ್ಶನ ಪಡೆದಿರಲಿಲ್ಲ.

ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜಯಂತ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರೀಗಳ 115ನೇ ಜನ್ಮ ದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸರಿಸುಮಾರು 2-3 ಲಕ್ಷ ಜನ ಸೇರುವ ನಿರೀಕ್ಷೆ ಇದೆ.

ವೇದಿಕೆಗೆ ‘ನಡೆದಾಡುವ ಬಸವ ಭಾರತ’ ಅಂತ ಹೆಸರಿಡಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದು, ಸುತ್ತೂರು ಶ್ರೀಗಳು, ಸಿಎಂ ಬೊಮ್ಮಾಯಿ ಸೇರಿ ಹಲವರು ಭಾಗಿ ಆಗಲಿದ್ದಾರೆ.

ಕಾರ್ಯಕ್ರಮದಲ್ಲಿ 100 ಜನ ಗಾಯಕರು, 150 ಮಂದಿ ಕಲಾವಿದರು ಸೇರಲಿದ್ದಾರೆ. ಮಠದ ಆವರಣದಲ್ಲಿ ಬ್ಯಾನರ್, ಕಟೌಟ್ಗಳು ರಾರಾಜಿಸುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಗಣಕ್ಕಾಗಿಯೇ ಬಗೆ ಬಗೆಯ ಖಾದ್ಯಗಳು ತಯಾರಾಗ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ