ಡೆಹ್ರಾಡೂನ್ : ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಮುಂದಿನ 2-3 ದಿನಗಳವರೆಗೆ ಎಚ್ಚರಿಕೆಯನ್ನು ನೀಡಿದೆ.
ಹವಾಮಾನ ಉತ್ತಮವಾಗುವವರೆಗೆ ತಂಗಿರುವ ಸ್ಥಳದಲ್ಲಿಯೇ ಇರುವಂತೆ ಕೇದಾರನಾಥ ಯಾತ್ರಾರ್ಥಿಗಳಿಗೆ ತಿಳಿಸಲಾಗಿದೆ.
ಕೇದಾರನಾಥಕ್ಕೆ ಭೇಟಿ ನಿಡಲು ಬರುವ ಯಾತ್ರಾರ್ಥಿಗಳ ಸುರಕ್ಷತೆಗಾಗಿ ಮನವಿ ಮಾಡಲಾಗುತ್ತಿದೆ. ಹವಾಮಾನ ಉತ್ತಮವಾಗುವವರೆಗೆ ಪ್ರಯಾಣಿಕರು ಅದೇ ಸ್ಥಳದಲ್ಲಿ ಇರಿ. ಮುಂಜಾಗೃತ ಕ್ರಮಗಳನ್ನು ಅನುಸರಿಸಿಯೇ ಯಾತ್ರೆಯನ್ನು ಮುಂದುವರಿಸಿ ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಹೇಳಿದರು.
ಕೇದಾರನಾಥ ಧಾಮದಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದ್ದು, ಯಾತ್ರೆಯನ್ನು ನಿಯಂತ್ರಿಸಲಾಗುತ್ತಿದೆ. ಸೋನ್ಪ್ರಯಾಗದಿಂದ ಬೆಗ್ಗೆ 10:30ರ ಬಳಿಕ ಕೇದಾರನಾಥಕ್ಕೆ ಹೋಗಲು ಅನುಮತಿ ನೀಡಲಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.