6 ತಿಂಗಳ ಬಳಿಕ ಮತ್ತೆ ವೀಕೆಂಡ್ ಕರ್ಫ್ಯೂ

ಶುಕ್ರವಾರ, 7 ಜನವರಿ 2022 (07:10 IST)
ಬೆಂಗಳೂರು : ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಅಪಾಯವನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಕಠಿಣ ಕ್ರಮ ಜಾರಿಗೆ ತಂದಿದೆ.

ಅದರಂತೆ ಐದೂವರೆ ತಿಂಗಳ ಬಳಿಕ ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಗಿದೆ. ಇಂದು ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ತುರ್ತು ಸೇವೆ ಹೊರತುಪಡಿಸಿ ಉಳಿದಂತೆ ಎಲ್ಲಾ ಸೇವೆಗಳು ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರ, ಹೋಟೆಲ್‌ಗಳು, ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಯಾವುದೇ ರೀತಿಯ ಸೇವೆಗಳು ವೀಕೆಂಡ್ ಕರ್ಫ್ಯೂನಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ವಿನಾಯಿತಿ ಪಡೆದಿರುವ 10, 11, 12 ತರಗತಿಗಳು ಕೂಡ ಬಂದ್ ಆಗಲಿವೆ. ಕೇವಲ ಫುಡ್ ಡೆಲಿವರಿ ಬಾಯ್ಸ್, ಕೈಗಾರಿಕೆ, ಟಿಲಿಕಾಂ ಸೇರಿದಂತೆ ವಿನಾಯಿತಿ ಪಡೆದವರಿಗೆ ಮಾತ್ರ ಓಡಾಡುವುದಕ್ಕೆ ಅವಕಾಶವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ