ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ರದ್ದು!

ಶುಕ್ರವಾರ, 21 ಜನವರಿ 2022 (15:11 IST)
ಬೆಂಗಳೂರು : ಕೋವಿಡ್ ನಿಯಂತ್ರಿಸಲು ಹೇರಿದ್ದ ವೀಕೆಂಡ್ ಕರ್ಫ್ಯೂ ಅನ್ನು ಕರ್ನಾಟಕ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಎರಡೇ ವಾರಕ್ಕೆ ವೀಕೆಂಡ್ ಕರ್ಫ್ಯೂ ಅಂತ್ಯಗೊಂಡಿದೆ.
 
ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ತಜ್ಞರ ಜೊತೆಗಿನ ಸಭೆಯ ಬಳಿಕ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಎರಡು ವಾರದಿಂದ ಜಾರಿಯಾಗಿದ್ದ ವೀಕೆಂಡ್ ಕರ್ಫ್ಯೂ ನಾಳೆ ಇರುವುದಿಲ್ಲ. ಆದರೆ ನೈಟ್ ಕರ್ಫ್ಯೂ  ಮುಂದುವರಿಯಲಿದೆ.

ಸಭೆಯ ಬಳಿಕ ಸಚಿವ ಅಶೋಕ್ ಸುದ್ದಿಗೋಷ್ಠಿ ನಡೆಸಿ ವೀಕೆಂಡ್ ವೀಕೆಂಡ್ ಕರ್ಫ್ಯೂ ತೆರವುಗೊಳಿಸಿದ್ದೇವೆ ಎಂದು ತಿಳಿಸಿದರು.ಯೂರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಕೋವಿಡ್ ಮೂರನೇ ಅಲೆಯ ವ್ಯಾಪಕವಾಗಿ ಹರಡಿದರೂ ತೀವ್ರತೆ ಕಡಿಮೆ ಇದೆ.

ಆಸ್ಪತ್ರೆ ದಾಖಲಾಗುವವರ ಸಂಖ್ಯೆ ಕಡಿಮೆ ಇದೆ. ಐಸಿಯು, ವೆಂಟಿಲೇಟರ್ ನಲ್ಲಿ ರೋಗಿಗಳು ಇಲ್ಲ. ವೀಕೆಂಡ್ ಕರ್ಫ್ಯೂಗೆ ಜನರ ಆಕ್ರೋಶ ಇದೆ. ಹೀಗಾಗಿ ವೀಕೆಂಡ್ ಕರ್ಫ್ಯೂ ರದ್ದು ಮಾಡುವುದು ಉತ್ತಮ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ ವೀಕೆಂಡ್ ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿಗೆ ಸಿಎಂ ಒಲವು ತೋರಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ