ಬೆಂಗಳೂರು : ರಾಜ್ಯದಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡುವಂತೆ ಹೋಟೆಲ್,
ಬಾರ್ ಮಾಲೀಕರು, ಉದ್ಯಮಿಗಳ ಸಂಘ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದು ಈ ಕುರಿತಾಗಿ ಶುಕ್ರವಾರ ರಾಜ್ಯ ಸರ್ಕಾರದ ಸಭೆ ನಡೆಯಲಿದೆ.
ಈವರೆಗೂ ವೀಕೆಂಡ್ ಕರ್ಫ್ಯೂ ರದ್ದುಗೊಳ್ಳುವ ಬಗ್ಗೆ ಒಂಚೂರು ಬಾಯ್ಬಿಡದ ಆರೋಗ್ಯ ಸಚಿವ ಕೆ. ಸುಧಾಕರ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, "ಇನ್ನೂ 24 ಗಂಟೆಗಳಿವೆ ಕಾಯಿರಿ, ಜನರಿಗೆ ತೊಂದರೆ ಕೊಡುವ ಯಾವ ಉದ್ದೇಶವೂ ಸರ್ಕಾರಕ್ಕೆ ಇಲ್ಲ.
ಜನರ ಆರೋಗ್ಯದ ದೃಷ್ಟಿಯಲ್ಲಿ ನಾಳೆ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ. ಜನರಿಗೆ ತೊಂದರೆ ಕೊಡುವುದರಿಂದ ಸರ್ಕಾರಕ್ಕೆ ಲಾಭವೂ ಇಲ್ಲ, ನಷ್ಟವೂ ಇಲ್ಲ' ಎಂದು ಹೇಳಿದ್ದಾರೆ. ಇದರಿಂದಾಗಿ ರಾಜ್ಯದ ಜನರಿಗೆ ಶುಭ ಶುಕ್ರವಾರವಾಗಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.