ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ
ಅಲ್ಲದೇ ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.
ಇಂದು(ಮಂಗಳವಾರ) ತಜ್ಞರ ಜೊತೆಗಿನ ಸಭೆ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಜಾರಿಯಲ್ಲಿರಲಿದೆ. ಇನ್ನು ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು.
10 ಮತ್ತು 12ನೇ ತರಗತಿ ಹೊರತುಪಡಿಸಿ ಇನ್ನುಳಿದ 1ರಿಂದ 9 ಹಾಗೂ 11ನೇ ತರಗತಿ ನಾಳೆಯಿಂದಲೇ(ಬುಧವಾರ) ಬಂದ್ ಮಾಡಲು ಸೂಚಿಸಲಾಗಿದೆ.