ನವದೆಹಲಿ : ಜಾಗತಿಕವಾಗಿ ನಿರ್ಬಂಧಗಳಿಗೆ ಒಳಗಾಗಿರುವ ರಾಷ್ಟ್ರಗಳ ಪಟ್ಟಿ ಬಿಡುಗಡೆಯಾಗಿದ್ದು, ಹೆಚ್ಚಿನ ನಿರ್ಬಂಧಕ್ಕೊಳಗಾದ ರಾಷ್ಟ್ರವಾಗಿ ರಷ್ಯಾ ಹೊರಹೊಮ್ಮಿದೆ.
ಉಕ್ರೇನ್ ಮೇಲೆ ಯುದ್ಧ ಸಾರಿದ ನಂತರ ಜಾಗತಿಕವಾಗಿ ನಿರ್ಬಂಧಕ್ಕೊಳಗಾದ ರಾಷ್ಟ್ರಗಳಲ್ಲಿ ರಷ್ಯಾ ಮೊದಲ ಸ್ಥಾನದಲ್ಲಿದೆ.
ಕ್ಯಾಸ್ಟಲಮ್.ಎಐ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ. ಉಕ್ರೇನ್ ಮೇಲಿನ ರಷ್ಯಾ ಆಕ್ರಮಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಮೆರಿಕ ಮತ್ತು ಯೂರೋಪ್ ಒಕ್ಕೂಟ ರಾಷ್ಟ್ರಗಳು ರಷ್ಯಾ ವಿರುದ್ಧ ಹಲವಾರು ನಿರ್ಬಂಧಗಳನ್ನು ವಿಧಿಸಿವೆ.
ದಿನ ಕಳೆದಂತೆ ರಷ್ಯಾ ಮೇಲಿನ ನಿರ್ಬಂಧಗಳ ಒತ್ತಡ ಮತ್ತಷ್ಟು ಹೆಚ್ಚಾಗುತ್ತಿದೆ. ರಷ್ಯಾ ಮೇಲೆ ಹೊಸದಾಗಿ 2,778 ನಿರ್ಬಂಧಗಳನ್ನು ವಿಧಿಸಲಾಗಿದ್ದು, ಈ ಸಂಖ್ಯೆ 5,530ಕ್ಕೆ ಏರಿಕೆಯಾಗಿದೆ.