ಸಿಎಂ ಸಭೆಯಲ್ಲಿ ತಜ್ಞರು ಹೇಳಿದ್ದೇನು?

ಭಾನುವಾರ, 28 ನವೆಂಬರ್ 2021 (09:46 IST)
ಬೆಂಗಳೂರು : ನಿನ್ನೆ ಕೊರೊನಾ ಹೊಸ ತಳಿ ಬಗ್ಗೆ ರಾಜ್ಯದ ಮುಖ್ಯಮತ್ರಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.
ಈ ವೇಳೆ ತಜ್ಞರು ಕೆಲ ಸಲಹೆಗಳನ್ನು ನೀಡಿದ್ದಾರೆ. ದಿನಕ್ಕೆ 60,000 ರಿಂದ 80,000ಕ್ಕೆ ಟೆಸ್ಟಿಂಗ್ ಹೆಚ್ಚಿಸಬೇಕು. ಸಾರ್ವಜನಿಕ ಸಭೆ ಹಾಗು ಸಮಾರಂಭಕ್ಕೆ ಕಡ್ಡಾಯ ಕೊವಿಡ್ ರೂಲ್ಸ್ ಪಾಲನೆಯಾಗಬೇಕು. ವಿದೇಶಗಳಿಂದ ಬಂದವರಲ್ಲಿ ಪಾಸಿಟಿವ್ ಕಾಣಿಸಿಕೊಂಡರೆ ನೆಗಟಿವ್ ವರದಿ ಬರುವರೆಗೂ ಕ್ವಾರಂಟೈನ್ ಮಾಡಬೇಕು. ನೆಗಟಿವ್ ಬಂದರೆ ಒಂದು ವಾರ ಮನೆಯಲ್ಲಿಯೇ ಇರುವಂತೆ ಎಚ್ಚರ ವಹಿಸಬೇಕು ಅಂತ ತಿಳಿಸಿದ್ದಾರೆ.
ಬಿಬಿಎಂಪಿಯಲ್ಲಿ 2,800 ಸಕ್ರಿಯ ಪ್ರಕರಣಗಳ ಕಂಟ್ರೋಲ್ ಮಾಡಬೇಕು. ವಿಶೇಷ ಗುಂಪುಗಳನ್ನ ಮಾಡಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡಬೇಕು. ಟೆಸ್ಟಿಂಗ್ ಸಂಖ್ಯೆ ಹೆಚ್ಚಿಸಿ ರ್ಯಾಂಡಮ್ ಚೆಕ್ ಮಾಡಬೇಕು. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಮಾರ್ಕೆಟ್ ವ್ಯಾಪಾರಿಗಳಿಗೆ, ಮಾಲ್, ರೆಸ್ಟೋರೆಂಟ್ ಸಿಬ್ಬಂದಿಗೆ, ಫ್ಯಾಕ್ಟರಿ, ಗಾರ್ಮೆಂಟ್ಸ್ಗಳಲ್ಲಿ ರ್ಯಾಂಡಮ್ ಚೆಕ್ ಮಾಡಬೇಕು ಅಂತ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ