ಭಾರತದ ವೈಭವ ಅನಾವರಣ ವಿಶೇಷತೆ ಏನು?

ಬುಧವಾರ, 26 ಜನವರಿ 2022 (14:32 IST)
ನವದೆಹಲಿ : ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಗಿದೆ.

ದೆಹಲಿ ರಾಜಪಥ್ನಲ್ಲಿ ಭಾರತದ ಸ್ವತಂತ್ರ್ಯೋತ್ಸವದ ಅಮೃತಮಹೋತ್ಸವ ಸಂಭ್ರಮ, ಕೋವಿಡ್ ಮಾರ್ಗಸೂಚಿಯ ನಡುವೆ ಗಣರಾಜ್ಯೋತ್ಸವ ಪರೇಡ್ ಸಂಭ್ರಮದಿಂದ ನಡೆಯಿತು.

ರಾಜಪಥ್ನಲ್ಲಿ ವಿರಾಟ್ ಭಾರತದ ಒಂದು ವಿಹಾಂಗಮ ನೋಟವನ್ನು ಪ್ರದರ್ಶಿಸಲಾಯಿತು. ನವ ಭಾರತದ ಮಿಲಿಟರಿ ಶಕ್ತಿ ಇಂದಿನ ಸಮಾರಂಭದಲ್ಲಿ ಅನಾವರಣಗೊಂಡಿತು.

ಈ ಸಮಾರಂಭದಲ್ಲಿ ಮೊಟ್ಟ ಮೊದಲ ಬಾರಿಗೆ 75 ವಿಮಾನಗಳು ಭವ್ಯ ಫ್ಲೈ-ಪಾಸ್ಟ್ ಮಾಡಿದವು. ಇದರೊಂದಿಗೆ ಪರೇಡ್ನಲ್ಲಿ ಹಲವು ರಾಜ್ಯಗಳ ಸ್ತಬ್ಧ ಚಿತ್ರ, ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡಗರ ಕಣ್ಮನ ಸೆಳೆಯಿತು.

ಬೆಳಗ್ಗೆ 10:30 ಸುಮಾರಿಗೆ ಆರಂಭಗೊಂಡ ಪರೇಡ್ ಕಾರ್ಯಕ್ರಮ 12:15ಕ್ಕೆ ಮುಕ್ತಾಯಗೊಂಡಿತು. ಪ್ರತಿ ವರ್ಷ ಈ ಕಾರ್ಯಕ್ರಮ ಬೆಳಗ್ಗೆ 10 ಗಂಟೆಯಿಂದ ಆರಂಭವಾಗುತ್ತಿತ್ತು. ಈ ಬಾರಿ 30 ನಿಮಿಷ ತಡವಾಗಿ ಆರಂಭಗೊಂಡಿತು. ರಾಜಪಥ್ನಲ್ಲಿ ಮಂಜು ಆವರಿಸಿಕೊಂಡಿದ್ದ ಕಾರಣ ಈ ಬಾರಿ ಕಾರ್ಯಕ್ರಮವನ್ನು ಪೂರ್ವನಿಗದಿಯಂತೆ 10:30ಕ್ಕೆ ಆರಂಭಿಸಲಾಯಿತು.

ಕೊರೊನಾ ಕಾಟದಿಂದಾಗಿ ಕಳೆದ ಬಾರಿಯಂತೆ ಈ ವರ್ಷ ಕೂಡಾ ಯಾವುದೇ ವಿದೇಶಿ ಮುಖ್ಯ ಅತಿಥಿಗೆ ಆಹ್ವಾನ ನೀಡಿಲ್ಲ. ಈ ಮೂಲಕ ಸತತ 2ನೇ ವರ್ಷ ಯಾವುದೇ ವಿದೇಶಿ ಅತಿಥಿ ಇಲ್ಲದೆ ಗಣರಾಜ್ಯೋತ್ಸವದ ಆಚರಣೆ ನಡೆಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ