ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ಏನು?

ಬುಧವಾರ, 5 ಜನವರಿ 2022 (06:05 IST)
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ.

ಇಂದು(ಮಂಗಳವಾರ) ತಜ್ಞರ ಜೊತೆಗಿನ ಸಭೆ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,  ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು  ಸ್ಪಷ್ಟಪಡಿಸಿದರು.

* ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.

* ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

*  ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ