ಬೆಂಗಳೂರು : ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಗಾಡಿಯನ್ನು ನಿಲ್ಲಿಸಬಾರದು.
ಕೇವಲ ಟ್ರಾಫಿಕ್ ರೂಲ್ಸ್ನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ಹೊರಡಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿರುವ ಪ್ರವೀಣ್ ಸೂದ್, ನಗರದಲ್ಲಿ ವಾಹನಗಳ ತಡೆದು ಪರಿಶೀಲನೆ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ರಸ್ತೆಯಲ್ಲಿ ಬರುವ ವಾಹನಗಳನ್ನು ಸುಖಾಸುಮ್ಮನೆ ತಡೆದು ವಾಹನಗಳ ಪರಿಶೀಲನೆ ನಡೆಸುವಂತಿಲ್ಲ. ಡ್ರಿಂ
ಕ್ ಆಂಡ್ ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ನಡೆಸಿ. ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡುವಂತಹ ವಾಹನಗಳನ್ನು ತಡೆದು ಪರಶೀಲಿಸಿ ಎಂದು ನಗರದ ಪೊಲೀಸ್ ಕಮೀಷನರ್ ಹಾಗೂ ಟ್ರಾಫಿಕ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಡಿಜಿಪಿ ಟ್ವೀಟ್ ಮಾಡಿದ್ದಾರೆ.