ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

ಶನಿವಾರ, 24 ಡಿಸೆಂಬರ್ 2022 (10:54 IST)
ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್ಗಳು, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ.

ಅದರಲ್ಲೂ ವಿಶೇಷವಾಗಿ ವೃದ್ಧರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ.

ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ, ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನವನ್ನು ಮಾಡಬಹುದಾಗಿದೆ. ಮುಂದುವರೆದು, ಸಭೆ ಹಾಗೂ ಸಮಾರಂಭಗಳ ಆಯೋಜಕರು ಈ ಕೆಳಗಿನ ಮಾರ್ಗಸೂಚಿಯನ್ನು ಪಾಲಿಸುವಂತೆ ನಿರೀಕ್ಷಿಸಲಾಗಿದೆ. 

ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ