ನಾಳೆ ಎಚ್ ಡಿಕೆ ಜತೆ ಪ್ರಮಾಣ ವಚನ ಸ್ವೀಕರಿಸಲಿರುವ ಒಬ್ಬನೇ ಒಬ್ಬ ಸಚಿವರು ಯಾರು?

ಮಂಗಳವಾರ, 22 ಮೇ 2018 (13:24 IST)
ಬೆಂಗಳೂರು: ನಾಳೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದ್ದು, ಸಿಎಂ ಆಗಿ ಕುಮಾರಸ್ವಾಮಿ ವಿಧಾನಸೌಧದ ಮುಂಭಾಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದುವರೆಗೆ ಕುಮಾರಸ್ವಾಮಿ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ಕುಮಾರಸ್ವಾಮಿ ಜತೆ ಇನ್ನೊಬ್ಬರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಬಂದಿದೆ.

ಇಂದು ಕಾಂಗ್ರೆಸ್ ಶಾಸಕಾಂಗ ಸಭೆ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದು, ಆ ಸಭೆಯಲ್ಲಿ ಕಾಂಗ್ರೆಸ್ ನ ಬಹುತೇಕ ಶಾಸಕರು ಕುಮಾರಸ್ವಾಮಿ ಜತೆ ಕಾಂಗ್ರೆಸ್ ನ ಒಬ್ಬ ಸಚಿವರೂ ಪ್ರಮಾಣ ವಚನ ಸ್ವೀಕರಿಸಬೇಕೆಂದು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಹೈಕಮಾಂಡ್ ಸೂಚಿಸಿದೆ. ಕುಮಾರಸ್ವಾಮಿ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು. ಕೊನೆಗೆ ಶಾಸಕರ ಒತ್ತಾಯದ ಬಳಿಕ ರಾಹುಲ್ ಗಾಂಧಿ ಜತೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಇಂದು ಸಂಜೆ ವೇಳೆಗೆ ಆ ಒಬ್ಬ ಸಚಿವರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ