ಕೆಪಿಸಿಸಿ ಮುನ್ನಡೆಸಲು ಕಾಂಗ್ರೆಸ್ ನಲ್ಲಿ ನಡೆದಿದೆ ಪೈಪೋಟಿ
ಮಂಗಳವಾರ, 29 ಮೇ 2018 (08:59 IST)
ಬೆಂಗಳೂರು: ಡಾ. ಜಿ ಪರಮೇಶ್ವರ್ ಉಪಮುಖ್ಯಮಂತ್ರಿಯಾದ ಬಳಿಕ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಇದೀಗ ಕಾಂಗ್ರೆಸ್ ನಲ್ಲಿ ಪೈಪೋಟಿ ಶುರುವಾಗಿದೆ.
ಡಿಕೆ ಶಿವಕುಮಾರ್ ಕಾಂಗ್ರೆಸ್ ನ ಅಧ್ಯಕ್ಷ ಪಟ್ಟಕ್ಕಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್ ಆಗಿದ್ದು, ಸಚಿವರ ಪಟ್ಟಿ ಆಯ್ಕೆ ನಡುವೆ ಕೆಪಿಸಿಸಿ ಅಧ್ಯಕ್ಷರ ಹೆಸರನ್ನೂ ಅಂತಿಮಗೊಳಿಸುವ ಸಾಧ್ಯತೆಯಿದೆ.
ಹೀಗಾಗಿ ಈ ಹುದ್ದೆಗಾಗಿ ಪೈಪೋಟಿ ಶುರುವಾಗಿದೆ. ಇನ್ನೊಂದು ಮೂಲಗಳ ಪ್ರಕಾರ ಈ ಹುದ್ದೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಹೈಕಮಾಂಡ್ ಒಲವು ಹೆಚ್ಚಿದೆಯಂತೆ. ಸಿದ್ದರಾಮಯ್ಯ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಕೊಂಡಿಯಾಗಬಹುದು ಎಂಬ ಯೋಜನೆ ಹೊಂದಿರುವ ಹೈಕಮಾಂಡ್ ಅವರಿಗೇ ಮಣೆ ಹಾಕಲು ಚಿಂತನೆ ನಡೆಸುತ್ತಿದೆ. ಅದೇನೇ ಇದ್ದರೂ ಅಂತಿಮವಾಗಿ ಯಾರಿಗೆ ಆ ಅದೃಷ್ಟ ಖುಲಾಯಿಸುತ್ತದೆ ಕಾದು ನೋಡಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.