ನವದೆಹಲಿ : ಒಬಿಸಿ, ಇಡಬ್ಲುಸಿ ಮೀಸಲಾತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಡೆಹಿಡಿಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು ಸೂಚನೆ ನೀಡಿದೆ.
ಕೇಂದ್ರ ಸರ್ಕಾರವು ಎಂಡಿಎಸ್ ಸೀಟ್ಗೆ ಒಬಿಸಿಗೆ ಶೇ. 27ರಷ್ಟು ಮೀಸಲಾತಿ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (ಇWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆ ಅರ್ಜಿಗಳ ವಿಚಾರಣೆ ಇನ್ನೂ ಮುಗಿದಿಲ್ಲ. ಹೀಗಾಗಿ, ಆಲ್ ಇಂಡಿಯಾ ಕೋಟಾದಡಿ ಒಬಿಸಿ ಹಾಗೂ ಇಡಬ್ಲುಸಿ ಮೀಸಲಾತಿ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಸಿಂಧುತ್ವದ ಬಗ್ಗೆ ನಿರ್ಧಾರವಾಗುವವರೆಗೂ ನೀಟ್-ಪಿಜಿ ಕೌನ್ಸೆಲಿಂಗ್ ನಡೆಸದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.