ನವದೆಹಲಿ : ಇಂದಿನಿಂದ 2000 ರೂಪಾಯಿ ನೋಟುಗಳ ಹಿಂತೆಗೆತಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಸೆಪ್ಟೆಂಬರ್ 30ರವರೆಗೂ ಈ ಪ್ರಕ್ರಿಯೆ ನಿರಂತರವಾಗಿ ಸಾಗಲಿದೆ.
50 ಸಾವಿರಕ್ಕಿಂತ ಹೆಚ್ಚು ಮೊತ್ತದ 2000 ರೂ. ಮುಖಬೆಲೆಯ ನೋಟುಗಳನ್ನು ಠೇವಣಿ ಇಡುವಾಗ ಪ್ಯಾನ್ ನಂಬರ್ ನೀಡುವುದು ಕಡ್ಡಾಯ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆಯೂ ಇದು ಇತ್ತು, ಈಗಲೂ ಇದೆ. ಮುಂದೆಯೂ ಇರುತ್ತೆ ಎಂದು ತಿಳಿಸಿದ್ದಾರೆ.