ವಿಶ್ವದಾದ್ಯಂತ ಆತಂಕ ಮೂಡಿಸಿದ ಮಂಕಿಪಾಕ್ಸ್!

ಮಂಗಳವಾರ, 31 ಮೇ 2022 (10:32 IST)
ಬರ್ನ್ : ಕೊರೊನಾ ಬಳಿಕ ಇದೀಗ ಮಂಕಿಪಾಕ್ಸ್ ವೈರಸ್ ವಿಶ್ವದಾದ್ಯಂತ ಆತಂಕ ಮೂಡಿಸುತ್ತಿದೆ.
 
ಈಗಾಗಲೇ ಮಂಕಿಪಾಕ್ಸ್ 20 ಕ್ಕೂ ಹೆಚ್ಚು ದೇಶಗಳಿಗೆ ಹರಡಿದ್ದು, ಸುಮಾರು 200 ಪ್ರಕರಣಗಳು ದೃಢಪಟ್ಟಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್ಒ) ಶುಕ್ರವಾರ ತಿಳಿಸಿದೆ.

ಮಂಕಿಪಾಕ್ಸ್ ವೈರಸ್ ದಂಶಕಗಳು ಹಾಗೂ ಮಂಗಗಳಂತಹ ಕಾಡು ಪ್ರಾಣಿಗಳಲ್ಲಿ ಹುಟ್ಟುತ್ತದೆ. ಸಾಂದರ್ಭಿಕವಾಗಿ ಜನರಿಗೂ ಹರಡುವ ವೈರಸ್, ಸಿಡುಬಿನ ಜಾತಿಗೆ ಸೇರುತ್ತದೆ. 

ಮಧ್ಯ ಹಾಗೂ ಪಶ್ಚಿಮ ಆಫ್ರಿಕಾದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದೆ. 1958ರಲ್ಲಿ ಇದನ್ನು ಮೊದಲ ಬಾರಿಗೆ ಮಂಗಗಳಲ್ಲಿ ಕಂಡುಹಿಡಿಯಲಾಗಿತ್ತು. ಹೀಗಾಗಿ ಇದಕ್ಕೆ ಮಂಕಿಪಾಕ್ಸ್ ಎಂದು ಹೆಸರಿಡಲಾಗಿದೆ.

1970ರಲ್ಲಿ ಮೊದಲ ಬಾರಿಗೆ ಕಾಂಗೋದ ಬಾಲಕನಲ್ಲಿ ರೋಗ ಪತ್ತೆಯಾಗಿತ್ತು.   ಕೋವಿಡ್ 4ನೇ ಅಲೆಯ ಭೀತಿಯಲ್ಲಿರುವ ಭಾರತಕ್ಕೂ ಮಂಕಿಪಾಕ್ಸ್ ಆತಂಕ ಶುರುವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ