ಮೂರನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ
24 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಯಡಿಯೂರಪ್ಪ ಈ ಹಿಂದೆ 2008 ರಲ್ಲಿ ಮಾಡಿದಂತೆ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಮಾರಂಭದಲ್ಲಿ ಯಡಿಯೂರಪ್ಪ ಮಾತ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಅವರ ಜತೆಗೆ ಬೇರೆ ಯಾರೂ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿಲ್ಲ. ಬಹುಶಃ ಬಹುಮತ ಸಾಬೀತುಪಡಿಸಿದ ಬಳಿಕ ಸಂಪುಟ ವಿಸ್ತರಣೆ ನಡೆಯಬಹುದು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.