ಮಳೆಯಿಂದ ಹಳದಿ ಅಲರ್ಟ್ ಘೋಷಣೆ!?

ಶನಿವಾರ, 30 ಅಕ್ಟೋಬರ್ 2021 (07:27 IST)
ಬೆಂಗಳೂರು : ಕರ್ನಾಟಕದಲ್ಲಿ ಹಲವೆಡೆ ನವೆಂಬರ್ 1ರವರೆಗೂ ಮಳೆ ಮುಂದುವರೆಯಲಿದೆ.
ರಾಜ್ಯದ ದಕ್ಷಿಣ ಒಳನಾಡು, ರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ ಹಾಗೂ ಗುಡುಗು, ಮಿಂಚು ಉಂಟಾಗುವ ಸಾಧ್ಯತೆಯಿದೆ. ಇಂದಿನಿಂದ ನವೆಂಬರ್ 1ರವರೆಗೆ ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ತಮಿಳುನಾಡು, ಕೇರಳ, ಪುದುಚೆರಿ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ನವೆಂಬರ್ 1 ರವರೆಗೆ ಗುಡುಗು ಮತ್ತು ಮಿಂಚು ಸಂಭವಿಸಬಹುದು.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದಿನಿಂದ ನವೆಂಬರ್ 1ರವರೆಗೂ ಕರ್ನಾಟಕದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗ ಸೇರಿದಂತೆ 14 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ