ಮಳೆಯಿಂದ ಹಳದಿ ಅಲರ್ಟ್ ಘೋಷಣೆ!?

ಗುರುವಾರ, 6 ಜನವರಿ 2022 (06:43 IST)
ಬೆಂಗಳೂರು : ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ.

ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿದ್ದ ಚಳಿಯೂ ಇದೀಗ ತಗ್ಗುತ್ತಿದೆ. ಆದರೆ, ದೆಹಲಿ, ನೊಯ್ಡಾ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿದೆ.

ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಇಂದಿನಿಂದ 3 ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿದೆ.

ದೆಹಲಿಯಲ್ಲಿ ಇಂದಿನಿಂದ ಜನವರಿ 9ರವರೆಗೆ ಮಳೆಯಾಗುತ್ತದೆ. ಇಂದಿನಿಂದ ಜನವರಿ 8ರ ಅವಧಿಯಲ್ಲಿ ಹೆಚ್ಚಿನ ಗಾಳಿ ಮತ್ತು ಮಳೆಯ ಸಾಧ್ಯತೆಯಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಭಾರೀ ಮಳೆ ಅಥವಾ ಹಿಮಪಾತ ಸಂಭವಿಸುತ್ತದೆ.

ಇಂದಿನಿಂದ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪಶ್ಚಿಮ ಮಧ್ಯಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ