ಬೆಂಗಳೂರು : ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯಾಗುವುದರಿಂದ ಕರಾವಳಿ, ಮಲೆನಾಡು ಸೇರಿ 13 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ನೀಡಲಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದೆ. ಇಂದು ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ನೈಋತ್ಯ ಮುಂಗಾರು ಬಂಗಾಳಕೊಲ್ಲಿಯಿಂದ ಹಾದು ಗುರುವಾರ ಅಥವಾ ಶುಕ್ರವಾರ ತಮಿಳುನಾಡಿನ ಕರಾವಳಿಯನ್ನು ಸಮೀಪಿಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಇಂದು ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಮತ್ತು ಗುರುವಾರ ಅತ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಬೀಳುತ್ತದೆ. ಬುಧವಾರ ಮತ್ತು ಗುರುವಾರ ಆಂಧ್ರಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಗುರುವಾರ ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.