180 ದಿನಗಳಾದರೂ ಕೆಲಸ ಸಿಗದ ನಿರುದ್ಯೋಗಿಗಳಿಗೆ ಯುವ ನಿಧಿ

ಶನಿವಾರ, 3 ಜೂನ್ 2023 (12:05 IST)
ಬೆಂಗಳೂರು : ಕಾಂಗ್ರೆಸ್  ಚುನಾವಣೆ ವೇಳೆ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಪುಟ ಒಪ್ಪಿಗೆ ನೀಡಿದೆ.
 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿ ಘೋಷಣೆ ಮಾಡಿರುವ ಗ್ಯಾರಂಟಿಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. 

ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡಲಾಗುತ್ತದೆ.

ಕೋರ್ಸ್ ಮುಗಿಸಿ 180 ದಿನಗಳಾದರೂ ಕೆಲಸ ಸಿಗದ ನಿರುದ್ಯೋಗಿಗಳಾಗಿರಬೇಕು. ವಯಸ್ಸಿನ ಮಿತಿ 18-25 ವರ್ಷದೊಳಗಿನ ನಿರುದ್ಯೋಗಿಗಳಿಗೆ ಈ ಯೋಜನೆ ಅನ್ವಯಗೊಳ್ಳಲಿದೆ. ಅರ್ಜಿ ಸ್ವೀಕಾರಗೊಂಡ ದಿನದಿಂದ 24 ತಿಂಗಳು ಯುವನಿಧಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ