5 ವರ್ಷದ ಮಗುವಿನಲ್ಲಿ ಝಿಕಾ ವೈರಸ್ ಪತ್ತೆ!

ಮಂಗಳವಾರ, 13 ಡಿಸೆಂಬರ್ 2022 (10:53 IST)
ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಕೋಳಿ ಕ್ಯಾಂಪ್ನ 5 ವರ್ಷದ ಮಗುವಿನಲ್ಲಿ ಝಿಕಾ ವೈರಸ್ ಪತ್ತೆಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದೆ. ಗ್ರಾಮದ ವಾತಾವರಣ ಬಗ್ಗೆ ಅಧ್ಯಯನವನ್ನೂ ನಡೆಸಿದೆ. 

5 ವರ್ಷದ ಮಗುವಿಗೆ ಜ್ವರ ಹೆಚ್ಚಾಗಿದ್ದರಿಂದ ರಾಯಚೂರಿನಿಂದ ಬಳ್ಳಾರಿಯ ರಿಮ್ಸ್ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಡೆಂಗ್ಯೂ, ಚಿಕನ್ ಗುನ್ಯಾ ಲಕ್ಷಣಗಳು ಇತ್ತೆಂದು ಮಾದರಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದ್ರೆ ಎಲ್ಲವೂ ನೆಗೆಟಿವ್ ಬಂದಿದ್ದರಿಂದ ಮಗುವಿನ ರಕ್ತದ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿ ಝಿಕಾ ವೈರಸ್ ಪತ್ತೆಯಾಗಿರುವುದು ತಿಳಿದುಬಂದಿತು.

ಆದ್ರೆ ಮಗುವಿಗೆ ಯಾವುದೇ ಟ್ರಾವೆಲ್ ಹಿಸ್ಟರಿಯೂ ಇರಲಿಲ್ಲ. ವರದಿ ಕೈ ಸೇರುವಷ್ಟರಲ್ಲಿ ಸಂಪೂರ್ಣ ಗುಣಮುಖವಾಗಿತ್ತು. ಆರೋಗ್ಯ ಇಲಾಖೆ ಮತ್ತೊಮ್ಮೆ ಕಳುಹಿಸಿದ್ದ ಬಾಲಕಿ ಹಾಗೂ ಪೋಷಕರ ಮಾದರಿಗಳು ನೆಗೆಟಿವ್ ಬಂದಿದೆ ಎಂದು ಡಿಎಚ್ಒ ಡಾ.ಸುರೇಂದ್ರ ಬಾಬು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ