ಇದರಲ್ಲಿ ಕೃಷಿ ಹಾಗೂ ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗುದೆ ಎಂದು ಹೇಳಿದ್ದಾರೆ. 20 ಲಕ್ಷ ರೈತರಿಗೆ ಪಂಪ್ ಸೆಟ್ ವಿತರಣೆ ಹಾಗೂ ಬರಡು ಭೂಮಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡುವುದಕ್ಕೆ ಹೆಚ್ಚಿನ ನೆರವು ನೀಡುವುದಾಗಿ ಹಾಗೂ ರೈತರ ಅನುಕೂಲಕ್ಕಾಗಿ ಕೃಷಿ ರೈಲು, ವಿಮಾನ ಉಡಾನ್ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಕೃಷಿ ಸಾಲಕ್ಕಾಗಿ ನಬಾರ್ಡ್ ಗೆ 15 ಲಕ್ಷ ಕೋಟಿ ರೂಪಾಯಿ ನೀಡಲಾಗುವುದು. ಹಾಗೂ ನರೇಗಾ ಯೋಜನೆಯಡಿ ಜೇನು ಕೃಷಿಗೆ ಉತ್ತೇಜನ ನೀಡಲಾಗುವುದು. ಕೃಷಿ ಉತ್ಪನ್ನಗಳಿಗಾಗಿ ಇ-ಮಾರುಕಟ್ಟೆ ಸ್ಥಾಪನೆ. ಜಾನುವಾರು ಕಾಲು ಬಾಯಿ ರೋಗ ತಡೆಗೆ ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿರುವ ರೈತರಿಗಾಗಿ ಧಾನ್ಯ ಲಕ್ಷ್ಮೀ ಯೋಜನೆಯಡಿ ಧಾನ್ಯಗಳನ್ನು ವಿತರಿಸುವುದಾಗಿ ಹೇಳಿದ್ದಾರೆ.