ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭವಾಗಲಿದ್ದು, ನಾಳೆ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸಕ್ತ ವರ್ಷದ ಬಜೆಟ್ ಮಂಡಿಸಲಿದ್ದಾರೆ.
ಇದೀಗ ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂಸತ್ ನ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ 2019-20ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಮಂಡಿಸಲಿದ್ದಾರೆ.
ಇಂದು ಆರಂಭಗೊಂಡ ಸಂಸತ್ತಿನ ಅಧಿವೇಶನ ಮೊದಲ ಹಂತ ಫೆಬ್ರವರಿ 11ರಂದು ಮುಕ್ತಾಯವಾಗಲಿದ್ದು, ಎರಡನೇ ಹಂತ ಮಾರ್ಚ್ 2ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ ಎನ್ನಲಾಗಿದೆ.