ಇಂದು ಕೇಂದ್ರ ಸರ್ಕಾರದ 2020-21ನೇ ಸಾಲಿನ ಬಜೆಟ್ ಮಂಡನೆ; ಜನರ ನಿರೀಕ್ಷೆಗಳೇನು?

ಶನಿವಾರ, 1 ಫೆಬ್ರವರಿ 2020 (07:56 IST)
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2020-21ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ.


2019ರ ಚುನಾವಣೆಯಲ್ಲಿ  ಗೆದ್ದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದ ಮೋದಿ ಸರ್ಕಾರದ  2ನೇ ಬಜೆಟ್ ಇದಾಗಿದ್ದು, ದೇಶದ  ಆರ್ಥಿಕತೆ ಮಂದಗತಿಯಲ್ಲಿರುವ ಕಾರಣ ಎಲ್ಲರ ಚಿತ್ತ ಈ ಬಜೆಟ್ ಮೇಲೆ  ಇದೆ ಎನ್ನಲಾಗಿದೆ.

ಹಾಗೇ ಈ ಬಜೆಟ್ ಬಗ್ಗೆ ಬಹಳ ನಿರೀಕ್ಷೆಗಳಿದ್ದು, ದೇಶದಲ್ಲಿ  ನಿರುದ್ಯೋಗ ಸ್ಥಿತಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಉದ್ಯೋಗ ಸೃಷ್ಟಿಗಾಗಿ ಸರ್ಕಾರ ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆ ಇದೆ. ಹಾಗೇ ಈ ಬಾರಿ ಬಜೆಟ್ ನಲ್ಲಿ ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಿಸಬಹುದೆಂಬ ನಿರೀಕ್ಷೆಯಲ್ಲಿ ವೇತನದಾರರಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ